ನಮಸ್ಕಾರ...!

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು!!!


ರಚನೆ: ಹುಯಿಗೋಳ ನಾರಾಯಣ ರಾವ್, ಸಂಗೀತ: ಪಿ. ಕಾಳಿಂಗ ರಾವ್

ಈ ತಾಣದಲ್ಲಿ ತಮಗೆ,

ಕನ್ನಡದ ಮೇರು ಕೃತಿಗಳ ಆಯ್ದ ಕೆಲವು ಭಾಗಗಳು, ಕನ್ನಡ ನಾಡು, ನುಡಿ, ಜಲ,ಪರಿಸರ ಸೊಬಗು ಇತ್ಯಾದಿಗಳ ವಿಶ್ಲೇಷಣೆ, ಕನ್ನಡ ಜನ, ಭಾಷೆ, ಸಂಸ್ಕೃತಿ,ಸಾಹಿತ್ಯ,ಸಂಗೀತ,ಪರಂಪರೆಗಳ ಕಿರು ಪರಿಚಯಗಳು,
ಭೌತಿಕ, ಆಧ್ಯಾತ್ಮಿಕ ವಿಷಯಗಳು


ಸವಿಯಲು ದೊರೈಯುತ್ತದೆ !!!

..ಜೊತೆಗೆ ನನ್ನ ಕೆಲವು ವಯಕ್ತೀಕ ಅಭಿಪ್ರಾಯಗಳು!!


ಸಿರಿಗನ್ನಡಂ ಗೆಳ್ಗೆ ಸಿರಿಗನ್ನಡಂ ಬಾಳ್ಗೆ!!

Friday, 28 November 2008

ಭಾಗ್ಯದ ಲಕ್ಷ್ಮಿ ಬಾರಮ್ಮ...!

ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ ||ಪ||

ಗೆಜ್ಜೆ ಕಾಲ್ಗಳ ಧ್ವನಿಯ ತೋರುತ,ಹೆಜ್ಜೆಯ ಮೇಲೆ ಹೆಜ್ಜೆಯ ನಿಕ್ಕುತ
ಸಜ್ಜನ ಸಾಧು ಪೂಜೆಯ ವೇಳೆಗೆ,ಮಜ್ಜಿಗೆಯೊಳಗಿನ ಬೆಣ್ಣೆಯಂತೆ ||೧||

ಕನಕ ವೃಷ್ಟಿಯ ಕರೆಯುತ ಬಾರೆ,ಮನಕ ಮನೆಯ ಸಿದ್ದಿಯ ತೋರೆ
ದಿನಕರ ಕೋಟಿ ತೇಜದಿ ಹೊಳೆವ,ಜನಕರಾಯನ ಕುಮಾರಿ ಬಾಮ್ಮ ||೨||

ಅತ್ತಿತ್ತಗಲದೆ ಭಕ್ತರ ಮನೆಯಲಿ,ನಿತ್ಯ ಮಹೋತ್ಸವ ನಿತ್ಯ ಸುಮಂಗಳ
ಸತ್ಯವ ತೋರುವ ಸಾಧು ಸಜ್ಜನರ,ಚಿತ್ತದಿ ಹೊಳೆವ ಪುತ್ಥಳಿ ಬೊಂಬೆ ||೩||

ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು,ಕಂಕಣ ಕ್ಯೆಯ ತಿರುವುತ ಬಾರೆ
ಕುಂಕುಮಾಂಕಿತ ಪಂಕಜಲೋಚನೆ ,ವೆಂಕಟರಮಣನ ಬಿಂಕದ ರಾಣಿ ||೪||

ಸಕ್ಕರೆ ತುಪ್ಪ ಕಾಲುವೆ ಹರಿಸಿ,ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿ ರಂಗನ,ಚೊಕ್ಕ ಪುರಂದರ ವಿಠಲನ ರಾಣಿ ||೫||

ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ ||ಪ||

- ಪುರಂದರ ದಾಸರು

No comments: